ಕೊಲಾರ ಜಿಲ್ಲೆಯ ವೇಮಗಲ್ – ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಬಹಿರಂಗವಾಗಿದೆ. ಈ ಚುನಾವಣೆಯಲ್ಲಿ 17 ಸ್ಥಾನಗಳ ಪೈಕಿ 10ರಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಂಯುಕ್ತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಗೆಲುವಿನ ಬಳಿಕ, ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹೃದಯಪೂರ್ವಕ ಧನ್ಯವಾದಗಳನ್ನ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ ವೇಮಗಲ್-ಕುರಗಲ್ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ 17 ಸ್ಥಾನಗಳ ಪೈಕಿ 10 ರಲ್ಲಿ ನಮ್ಮ ಜೆಡಿಎಸ್ – ಬಿಜೆಪಿ ಬೆಂಬಲಿತ ಎನ್‌ಡಿಎ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿರುವುದು ಸಂತಸ ತಂದಿದೆ.
ಈ ಗೆಲುವಿಗೆ ಕಾರಣೀಭೂತರಾದ ಜೆಡಿಎಸ್ – ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಮತ್ತು ಮತದಾರ ಬಂಧುಗಳಿಗೆ
ಹೃತ್ಪೂರ್ವಕ ಧನ್ಯವಾದಗಳು ಅಂತ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಒಂದನ್ನ ಹಾಕಿದ್ದಾರೆ.
ಇನ್ನು, ಇದು ಸ್ಥಳೀಯ ಮಟ್ಟದಲ್ಲಿ ಬಹಳ ಮಹತ್ವದ ರಾಜಕೀಯ ತಿರುವು. ಇದರಿಂದ ಜೆಡಿಎಸ್ – ಬಿಜೆಪಿ ಮೈತ್ರಿಯ ಬಲ ಹೆಚ್ಚಾಗಿರುವುದು ಕಾಣ್ತಿದೆ. ಮತ್ತು ಸ್ಥಳೀಯ ಚುನಾವಣೆಯಲ್ಲೂ ಇದರ ಪರಿಣಾಮ ಬೀರುತ್ತದೆ ಅಂತಾ ರಾಜಕೀಯ ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.