ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

 

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.

 

ಪ್ರಸ್ತುತ ವಿಧಾನಮಂಡಲ ಅಧಿವೇಶನ ಇದ್ದು, ಅದು ಮುಗಿದ ನಂತರವೇ ಜಲಧಾರೆ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

 

ಒಟ್ಟು ಹದಿನೈದು ವಾಹನಗಳು ರಾಜ್ಯದ ಎಲ್ಲಾ ಕಡೆ ಸಂಚಾರ ಮಾಡಲಿವೆ. 180 ವಿಧಾನಸಭೆ ಕ್ಷೇತ್ರಗಳಲ್ಲಿ ಸಂಚರಿಸಿ 55ಕ್ಕು ಹೆಚ್ಚು ಕಡೆ ಪವಿತ್ರ ಜಲವನ್ನು ಕಲಶಗಳಲ್ಲಿ  ಸಂಗ್ರಹ ಮಾಡಲಿವೆ. ಆ ಜಲವನ್ನು ತಂದು ಪಕ್ಷದ ರಾಜ್ಯ ಕಚೇರಿಯಲ್ಲಿ ಒಂದು ವರ್ಷ ಕಾಲ ಇತ್ತು ಪೂಜೆ ಮಾಡಲಾಗುವುದು ಎಂದರು.

 

About The Author