Dharwad News: ಧಾರವಾಡ: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುಣಾವಣೆ ಮೇ 7 ರಂದು ಜರುಗಿದ್ದು, ಜೂನ್ 4ರಂದು ಮತ ಎಣಿಕೆ ಜರುಗುವ ಹಿನ್ನೆಲೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
ಜೂನ್ 4ರಂದು ಮತ ಎಣಿಕೆ ಇರುವುದರಿಂದ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ ಮತ ಎಣಿಕೆ ಕೇಂದ್ರದ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 2ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 5ರ ಸಂಜೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಅವರು ಆದೇಶಿಸಿದ್ದಾರೆ.
ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ
ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ