ರಾಜ್ಯದಲ್ಲಿ ಇಂದಿನಿಂದ ಫ್ರೀ ವ್ಯಾಕ್ಸಿನ್…

www.karnatakatv.net:ರಾಜ್ಯ- ಇಂದಿನಿಂದ ರಾಜ್ಯದ್ಯಂತ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಜೂನ್ 21ರಿಂದ 18ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ನೀಡಲಾಗುವುದು ಎಂದು ಘೋಷಣೆ ಮಾಡಿದ್ರು. ಅದರಂತೆ ಇಂದಿನಿಂದ ನೂತನ ಲಸಿಕೆ ನೀತಿ ಜಾರಿಯಾಗಿದೆ. ಪ್ರತಿಯೊಬ್ಬರು ಲಸಿಕೆ ಪಡೆದುಕೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡುವ ನಿರ್ಣಯ ಕೈಗೊಂಡಿದೆ. ಇದು ಸುರಕ್ಷಿತವಾಗಿದೆ, ಯಾರೂ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಇನ್ನು, ಒಂದೇ ದಿನ 7 ಲಕ್ಷ ಜನರಿಗೆ ಕೊರೊನಾ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಲಸಿಕೆ ಸರಬರಾಜು ಮಾಡಲಾಗಿದೆ. ಈ ಅವಕಾಶವನ್ನ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ರು.

About The Author