Monday, October 6, 2025

Latest Posts

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕುರಿತು ಸಂಪೂರ್ಣ ತನಿಖೆ- CM ಬೊಮ್ಮಾಯಿ

- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ ಅಥವಾ ಸಿಬ್ಬಂದಿಗೆ ಬೆದರಿಕೆ ಕರೆಗಳು ಬಂದಿದ್ದರೆ ವಿವರಗಳನ್ನು ನೀಡಲು ತಿಳಿಸಿದ್ದೇನೆ ಎಂದರು.

ಅದರ ಜೊತೆಗೆ ಡಿಜಿ ಅವರನ್ನು ಕರೆದು ಮಾತನಾಡಿದ್ದು ಈ ವಿಚಾರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಎರಡೂ ಕಡೆ ಇದು ನಡೆಯುತ್ತಿದ್ದು, ಇನ್ನೊಬ್ಬರ ಮನಸ್ಸನ್ನು ಕೆಡಿಸುವ ಪ್ರಚೋದನಕಾರಿ ಹೇಳಿಕೆಯನ್ನು ಕೊಡಬಾರದು. ಈ ಬಗ್ಗೆ ಕಟ್ಟುನಿಟ್ಟಾಗಿ ಆದೇಶಗಳನ್ನು ನೀಡಿ. ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆಯನ್ನು ಹೆಚ್ಚಾಗಿ ನೀಡಬೇಕು. ಎಂದು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

- Advertisement -

Latest Posts

Don't Miss