Thursday, February 6, 2025

Latest Posts

ಸಕಲ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ..!

- Advertisement -

www.karnatakatv.net: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಈಗಾಗಲೇ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಇಡೀ ದಿನ ಅಭಿಮಾನಿಗಳು ಹಾಗೂ ಆತ್ಮೀಯರು, ಗಣ್ಯರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿತ್ತು ಹಾಗೇ ಇಂದು ಕೂಡಾ ಸಂಜೆಯವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿಯ ಪಕ್ಕದಲ್ಲಿ ಇಂದು ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್ ಕುಮಾರ್ ಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.

- Advertisement -

Latest Posts

Don't Miss