- Advertisement -
Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ಮಾಡುತ್ತೇವೆ ಎಂದರು.
ಇದೇ ವರ್ಷದಲ್ಲಿ ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಚುನಾವಣೆ ನಡೆಯುತ್ತದೆ. ಇದರಲ್ಲಿ ಯಾವುದೇ ವಿಳಂಬ ಆಗುವುದಿಲ್ಲ ಎಂದು ಅವರು ಹೇಳಿದರು.
- Advertisement -