Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿತ್ತು.
ಈ ಹಿನ್ನೆಲೆ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಿ ಭದ್ರತೆ ಒದಗಿಸಲಾಗಿತ್ತು. ಆದರೆ ಇಂದು ಸಚಿವರ ಮನೆಗೆ ಮುತ್ತಿಗೆ ಹಾಕಿದ್ದಾರೆ.
ಸಚಿವರ ಮನೆಗೆ ಮುತ್ತಿಗೆ ಹಾಕಿದ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ 10 ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ವಿಚಾರಣೆ ನಡೆಯುತ್ತಿದೆ.
Pinakini river story- ತಾಯಿ ಹೇಳಿದ ಬುದ್ದಿ ಮಾತಿಗೆ ಮನನೊಂದ ಮಗಳು ಆತ್ಮಹತ್ಯೆ
KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.