Gadag News: ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ

Gadag News: ಗದಗ: ಗದಗದ ಬೆಟಗೇರಿಯ ಮಂಜುನಾಥ್ ನಗರದಲ್ಲಿ ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಮನೆಯಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಅಕ್ಕಿಯನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಟಗೇರಿ ಪೊಲೀಸರು ಆಹಾರ ಇಲಾಖೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, 3.6 ಕ್ವಿಂಟಲ್ ಅಕ್ರಮ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.

ಅಲ್ಲದೇ, ಅಕ್ರಮ ಅಕ್ಕಿ ದಂಧೆಯಲ್ಲಿ ಪಾಲ್ಗೊಂಡಿದ್ದ ಅಹ್ಮದ್ ಯಲಿಗಾರನನ್ನು ಬಂಧಿಸಿರುವ ಪೋಲೀಸರು ಬೆಟಗೇರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

About The Author