ಗದಗ ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ..!

Gadag News: ಗದಗ ಜಿಲ್ಲೆಯಲ್ಲಿ ಎರಡು ಪ್ರಮುಖ ಮಠದ ನಡುವೆ ಸಂಘರ್ಷ ಶುರುವಾಗಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರಿಂದ ಕರಾಳ ದಿನ ಆಚರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿಗಳು, ಭಾವೈಕ್ಯತೆಯ ಪರಂಪರೆ ಶಿರಹಟ್ಟಿಯ ಫಕೀರೇಶ್ವರ ಮಠದ್ದಾಗಿದೆ. ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿಯವರಿಗೆ ಭಾವೈಕ್ಯೆಯ ಹರಿಕಾರ ಅನ್ವಯ ಆಗೋದಿಲ್ಲ. ಹೀಗಾಗಿ ಭಾವೈಕ್ಯತಾ ಹರಿಕಾರ ಎನ್ನುವ ಪದವನ್ನು ಬಳಕೆ ಮಾಡಬಾರದು. ಈಗೀನ ತೋಂಟದಾರ್ಯ ಮಠದ ಶ್ರೀಗಳಾದ ಸಿದ್ದರಾಮ ಸ್ವಾಮೀಜಿ ಮನವಿ. ಶಿರಹಟ್ಟಿ ಫಕೀರೇಶ್ವರ ಮಠ ಹಿಂದೂ- ಮುಸ್ಲಿಂ ಭಾವ್ಯಕ್ಯತೆ ಮಠ. ತೋಂಟದಾರ್ಯ ಮಠ ವಿರಕ್ತಮಠ ಮಠದ ಸಂಪ್ರದಾಯ ಹೊಂದಿದೆ. ಫಕೀರೇಶ್ವರ ಮಠದ ಭಾವೈಕ್ಯತೆಯ ಸಂಪ್ರದಾಯ. ಫಕೀರೇಶ್ವರ ಮಠ ಹಿಂದೂ ಮುಸ್ಲಿಂ ಎರಡು ಸಂಪ್ರದಾಯ ಹೊಂದಿರೋ ಮಠ. ಹೀಗಾಗಿ ಭಾವೈಕ್ಯತಾ ದಿನ ಆಚರಣೆ ನಮ್ಮ ವಿರೋಧ ಇದೆ ಎಂದಿದ್ದಾರೆ.

ಮನವಿಗೆ ಸ್ಪಂದಿಸದಿದ್ದರೆ ತೋಂಟದಾರ್ಯ ಮಠದ ಬೀದಿಯಲ್ಲಿ ಬೃಹತ್ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ, ಭಾವೈಕ್ಯತಾ ದಿನವೆಂದು ಘೋಷಣೆ ಮಾಡಿದ್ದರು. ಆದರೆ ಆಗ ಹೋರಾಟ ಮಾಡಿದ ಫಲವಾರಿ, ಬೊಮ್ಮಾಯಿ ಸುಮ್ಮನಾಗಿದ್ದರು. ಈಗ ಶ್ರೀಮಠದ ಆಮಂತ್ರಣ ಪತ್ರಿಕೆಯಲ್ಲಿ ಭಾವೈಕ್ಯತಾ ದಿನವೆಂದು ಪ್ರಸ್ತಾಪ ಮಾಡಲಾಗಿತ್ತು. ಆಮಂತ್ರಣ ಪತ್ರಿಕೆ ಹಿಡಿದು, ಫಕೀರ ದಿಂಗಾಲೇಶ್ವರ ಶ್ರೀ ಮಾಧ್ಯಮಗೋಷ್ಠಿ‌ ನಡೆಸಿದ್ದು, ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು, ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಚಲಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ನಟ ಜಗ್ಗೇಶ್ ನಿಂದನೆಗೆ ವರ್ತೂರು ಸಂತೋಷ್ ಹೇಳಿದ್ದೇನು..?

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

About The Author