ಬೆಂಗಳೂರು: ಆಗಸ್ಟ್ 31ರಂದು “ಗಣೇಶ ಚತುರ್ಥಿ” ದಿನದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಗೊಳಿಸಲಾಗಿದೆ.
ಈ ಸಂಬಂಧ ಬಿಬಿಎಂಪಿಯಿಂದ ಆದೇಶ ಹೊರಡಿಸಿದ್ದು, ದಿನಾಂಕ: 31-08-2022 ಬುಧವಾರದಂದು ” ಗಣೇಶ ಚತುರ್ಥಿ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ.




