Wednesday, June 12, 2024

Latest Posts

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

- Advertisement -

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪಂಜಾಬ್, ರಾಜಸ್ಥಾನ ರಾಜ್ಯಗಳಿಗೆ ಹೋಗಿದ್ದೆ. ನನಗೆ ಯಾವುದೇ ರೀತಿಯ ಅಸಮಾಧಾನವಿಲ್ಲ. ಮುಂಚಿತವಾಗಿಯೇ ನಾನು ಜಿಲ್ಲಾಧ್ಯಕ್ಷರಿಗೆ ಹೇಳಿದ್ದೆ ಎಂದರು.

ಬಿಜೆಪಿ ಟಿಕೆಟ್ ಗಳು ಮಾರಾಟಕ್ಕೆ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಇದರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಚೈತ್ರ ಕುಂದಾಪುರ ವಿರುದ್ಧ ತನಿಖೆ ನಡೆಯುತ್ತಿದೆ. ಯಾವ ಪಕ್ಷದವರೇ ಮಾಡಿದರು ತನಖೆಯಿಂದ ಅದು ಹೊರ ಬರಲೇಬೇಕು ಎಂದು ಅವರು ಹೇಳಿದರು.

ಜಗದೀಶ್ ಶೆಟ್ಟರನ್ನು ಯಾರು ಹೆಚ್ಚು ಬೈತಾರೋ ಅವರೇ ವಿರೋಧ ಪಕ್ಷದ ನಾಯಕರಾಗ್ತಾರೆ ಅನ್ನೋ ವಿಚಾರ
ಅದರ ಬಗ್ಗೆ ನನಗೆ ಗೊತ್ತಿಲ್ಲ. ಸದ್ಯಕ್ಕೆ ನಾನು ಪಕ್ಷ ಬಿಡುವ ವಿಚಾರದಲ್ಲಿ ಇಲ್ಲ. ಆದರೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾತನಾಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.

ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ವಿಚಾರದ ಬಗ್ಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಅದನ್ನು ಮಾಡಿಕೊಂಡಿದ್ದಾರೆ. ಮೋದಿಯವರನ್ನು ಪ್ರಧಾನಿ ಮಾಡಲು ಹೇಗೆ ಅನುಕೂಲ ಆಗುತ್ತೋ ಆ ರೀತಿ ಮಾಡಿರುತ್ತಾರೆ. ವಾಜಪೇಯಿ ಕಾಲದಿಂದಲೂ ಸಣ್ಣ ಸಣ್ಣ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡದ್ದಿದೆ‌ ಎಂದು ಅವರು ಹೇಳಿದರು.

ಧಾರವಾಡ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದ ಅವರು, ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಮುಖಂಡರ ಟಾರ್ಗೆಟ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಚೈತ್ರ ಕುಂದಾಪುರ ಸೇರಿ ಎಲ್ಲರ ಬಗ್ಗೆಯೂ ತನಿಖೆಯಿಂದ ಗೊತ್ತಾಗಲಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರದೀಪ್ ಶೆಟ್ಟರ್ ಹೇಳಿದರು.

Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

Ganesh statue: ಹುಬ್ಬಳ್ಳಿಯ ಬೀದಿಗಳಲ್ಲಿ ಗಣೇಶ ಮೂರ್ತಿ ಭರ್ಜರಿ ಮೆರವಣಿಗೆ..!

- Advertisement -

Latest Posts

Don't Miss