Gujarath News:
ಗುಜರಾತ್ ನ ವಡೋದರಾದಲ್ಲಿ ಸೋಮವಾರ ರಾತ್ರಿ ಗಣೇಶನ ಮೂರ್ತಿಯನ್ನು ಹೊತ್ತ ಮೆರವಣಿಗೆಯು ಸೂಕ್ಷ್ಮ ಪ್ರದೇಶದಲ್ಲಿ ಸಾಗುತ್ತಿದ್ದಾಗ ಎರಡು ಸಮುದಾಯಗಳ ಸದಸ್ಯರು ಪರಸ್ಪರ ಘರ್ಷಣೆ ಮತ್ತು ಕಲ್ಲುಗಳನ್ನು ಎಸೆದಿದ್ದಾರೆ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೂರ್ತಿಯನ್ನು ಶಾಂತಿಯುತವಾಗಿ ಕೊಂಡೊಯ್ಯಲಾಯಿತು ಎಂದು ತಿಳಿದು ಬಂದಿದೆ.
ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಮೇಲೆ ಎರಡೂ ಕಡೆಯ ಸದಸ್ಯರ ವಿರುದ್ಧ ವಡೋದರಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 13 ಜನರನ್ನು ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕಲ್ಲು ತೂರಾಟದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್
ಬೆಂಗಳೂರಿನ ಟೌನ್ ಹಾಲ್ ಬಾಡಿಗೆ ದರ ಪರಿಷ್ಕರಣೆ: ಹೀಗಿದೆ ನೂತನ ದರಪಟ್ಟಿ