www.karnatakatv.net :ಬೆಳಗಾವಿ: ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿತ್ತು.
ಗಣೇಶೋತ್ಸವಕ್ಕೆ ಐದು ದಿನಗಳ ಕಾಲ ಷರತ್ತುಬದ್ಧ ಅನುಮತಿಯನ್ನು ರಾಜ್ಯ ಸರ್ಕಾರ ನೀಡಿದೆ. ಆದರೆ ಇದಕ್ಕೆ ಗಣೇಶ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಮಂಗಳವಾರ ಬೆಳಗಾವಿ ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಗಣೇಶ ಮಹಾಮಂಡಳಗಳು ಮತ್ತು ಅಧಿಕಾರಿಗಳ ಸಭೆಯನ್ನು ಕರೆದಿದ್ದರು.
ಸಭೆಯಲ್ಲಿ ಮಾತನಾಡಿದ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳದ ನೇತಾಜಿ ಜಾಧವ ಸರ್ಕಾರದ ಎಲ್ಲಾ ನಿಯಮ ಪಾಲನೆ ಮಾಡಲು ನಾವು ಸಿದ್ಧ. ಕೋವಿಡ್ ನಿಯಮ ಅನುಸರಿಸಿ ಉತ್ಸವ ಆಚರಣೆ ಮಾಡುತ್ತೇವೆ. ಕೇವಲ 5 ದಿನ ಮೂರ್ತಿ ಪ್ರತಿಷ್ಠಾಪನೆ ಮಾಡಲು ನಮ್ಮ ವಿರೋಧ ಇದೆ. ಸಂಪ್ರದಾಯದಂತೆ 10 ದಿನ ಉತ್ಸವ ಆಚರಣೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡರು.
ಸಭೆಯಲ್ಲಿ ಜಿ.ಪಂ. ಸಿಇಓ ದರ್ಶನ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಡಿಸಿಪಿ ಡಾ.ವಿಕ್ರಮ್ ಆಮ್ಟೆ, ಪಾಲಿಕೆ ಆಯುಕ್ತ ಡಾ.ರುದ್ರೇಶ್ ಗಾಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ