ಹುಬ್ಬಳ್ಳಿ; ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ ಸಂಜು ಬಡಸ್ಕರ್ ಮೆರವಣಿಗೆಯಲ್ಲಿ ಭಾಗವಹಿಸಿದರು. ಇನ್ನೂ ಸಾವಿರಾರು ಭಕ್ತರು ಕುಣಿದು ಕುಪ್ಪಳಿಸಿ, ಜೈ ಶ್ರೀರಾಮ ಘೋಷಣೆ ಮೂಲಕ ಗಣೇಶನಿಗೆ ವಿದಾಯ ಹೇಳಿದರು.ಮೆರವಣಿಗೆ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್ ತಂಡ ಪ್ಯಾರಾಮಿಲಿಟರಿ, ರ‌್ಯಾಪಿಡ್ ಆಕ್ಷನ್ ಫೋರ್ಸ್ ಸೇರಿದಂತೆ ನಗರದಾದ್ಯಂತ 5 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
ಮಹಾಮಂಗಳಾರತಿಯಲ್ಲಿ ಪಾಲ್ಗೊಂಡ ಶ್ರೀರಾಮಸೇನೆ ರಾಷ್ಟ್ರೀಯ ಪ್ರಮೋದ್ ಮುತಾಲಿಕ್ ದೇವರ ದರ್ಶನ ಪಡೆದರು. ಬಳಿಕ ಮಾಧ್ಯಮಗಳ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು.ಅಂಜುಮನ್ ಸಂಸ್ಥೆಯವರ ದುರುದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ.
ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಅಂತ ವಾಗ್ದಾಳಿ ನಡೆಸಿದರು.
Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!
Hubli:ಎಂಪಿ ಚುನಾವಣೆಗೆ ನಿಲ್ಲಿ ಜನ ನಿಮ್ಮನ್ನ ಲಾಗಾ ಹೊಡೆಸುತ್ತಾರೆ : ಶೆಟ್ಟರ್ ವಿರುದ್ದ ಹರಿಹಾಯ್ದ ಯತ್ನಾಳ್…!
Hubli Ganesha ಹುಬ್ಬಳ್ಳಿ (ಈದ್ಗಾ) ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಮಾರ್ಗ ಬದಲಾವಣೆ..!