ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು.
ಈ ಬಾರಿ ೧೧ ದಿನಗಳವರೆಗೆ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ನೀಡಬೇಕು ಮತ್ತು ಭಕ್ತಿಗೀತೆ, ನೃತ್ಯ, ದೇಶಭಕ್ತಿ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ಡೊಳ್ಳಿನ ಕುಣಿತ, ಭಜನೆ ಮುಂತಾದ ಕಾರ್ಯಕ್ರಮಗಳ ಆಯೋಜನೆಗಳನ್ನು ರೂಪಿಸಲಾಗಿದೆ.
ಈ ನಿಟ್ಟಿನಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಶೀಘ್ರವೇ ಅನುಮತಿ ನೀಡಬೇಕು. ಆದ್ದರಿಂದ ಪೂರ್ವ ತಯಾರಿಕೆಗಾಗಿ ಮೈದಾಬ ನೀಡಲು ನಮಗೆ ೩ ದಿನದೊಳಗೆ ನಮಗೆ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಭಾಗದ ಅಧ್ಯಕ್ಷರಾದ ಗದಿಗೆಪ್ಪ ಕುರವತ್ತಿ, ಜಿಲ್ಲಾಧ್ಯಕ್ಷರಾದ ಅಣ್ಣಪ್ಪ ದಿವಟಗಿ, ಜಿಲ್ಲಾ ಗೌರವ ಅಧ್ಯಕ್ಷರಾದ ರಾಜು ಗಾಡಗೋಳಿ, ಜಿಲ್ಲಾ ಸಂಘಟನೆ ಕಾರ್ಯದರ್ಶಿ ಮಂಜು ಕಾಟಕರ, ತಾಲೂಕು ಅಧ್ಯಕ್ಷ ಬಸು ದುರ್ಗದ, ನಗರ ಪ್ರಮುಖ ಪ್ರವೀಣ ಮಾಳದಕರ, ಬಸವರಾಜ್ ಗೌಡರು ಸೇರಿದಂತೆ ಉಪಸ್ಥಿತರಿದ್ದರು.
Shakthi Yojane: ಉಚಿತ ಬಸ್ ಪ್ರಯಾಣ ಯೋಜನೆ ಕೈಬಿಡುವ ವದಂತಿಗಳಿಗೆ ಸಚಿವರ ಕಿಡಿ..!
Love Jihad : ಹಿಂದೂ ಕಾರ್ಯಕರ್ತರ ರಕ್ತ, ಬೆವರಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ಏನು ಮಾಡಿಲ್ಲ: ಪ್ರಮೋದ್ ಮುತಾಲಿಕ್