ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ ಮಾಲೀಕ ಮತ್ತು ಆತನ ಸಂಬಂಧಿಕರು ಸೇರಿ ಸಾಮೂಹಿಕವಾಗಿ ಅತ್ಯಾಚಾರ ಗೈದಿದ್ದಾರೆ. ಸಂತ್ರಸ್ಥ ಬಾಲಕಿಗೆ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ರಕ್ಷಣೆ ನೀಡಿದ್ದು, ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮೂವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್
ಕಾಂಗ್ರೆಸ್ ಸಂಸದರು ಉದ್ದೇಶಪೂರ್ವಕವಾಗಿ ಲೋಕಸಭೆಯ ಪ್ರಶ್ನೋತ್ತರ ವೇಳೆ ಅಡ್ಡಿಪಡಿಸಿದ್ದಾರೆ : ಕೇಂದ್ರ ಸಚಿವ ಅಮಿತ್ ಶಾ