www.karnatakatv.net : ಮೈಸೂರು : ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಮೈಸೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದಿಂದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಯುವತಿಯ ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಈ ನೀಚ ಕೃತ್ಯ ನಡೆಸಿದ್ದಾರೆ. ಈ ಘಟನೆ ಚಾಮುಂಡಿ ಬೆಟ್ಟದ ಲಲಿತಾದ್ರಿಪುರ ಬಳಿಯಲ್ಲಿ ನಡೆದಿದೆ ಎನ್ನಲಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಡಿಸಿಪಿ ಪ್ರದೀಪ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಸ್ಥಳದಲ್ಲಿ ಸಾಕ್ಷ್ಯಾಧಾರಗಳ ಪತ್ತೆ ಕುರಿತಾಗಿ ಎಫ್ಎಸ್ಎಲ್ ತಂಡ ಕೂಡ ಕಾರ್ಯಪ್ರವೃತವಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರೋ ಆಲನಹಳ್ಳಿ ಪೊಲೀಸರು ಆರೋಪಿಗಳ ಪತ್ತೆಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರೋ ಸಂತ್ರಸ್ತ ಯುವತಿ ಮತ್ತು ಆಕೆಯ ಸ್ನೇಹಿತನಿಂದ ಮತ್ತಷ್ಟು ಮಾಹಿತಿ ಸಂಗ್ರಹಿಸಿದ್ದಾರೆ.
ಒಟ್ಟಾರೆ ಸಾಂಸ್ಕೃತಿಕ ನಗರಿಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆ ನಡೆದಿರೋದು ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರು ಮತ್ತೆ ಚಿಂತೆಗೀಡಾಗುವಂತೆ ಮಾಡಿದೆ.
ಕರ್ನಾಟಕ ಟಿವಿ- ಮೈಸೂರು