Monday, October 27, 2025

Latest Posts

ಶಾಲಾ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಕೊಡಿ : ಸುರೇಶ್ ಕುಮಾರ್

- Advertisement -

19 ಮತ್ತು 22 ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಶಾಲಾಶುಲ್ಕ ಕಟ್ಟಿಲ್ಲವೆಂದು ಪ್ರವೇಶ ಪತ್ರ ನೀಡದೆಯಿರೊ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಬಿಇಓಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಕ್ಕಳಿಗೆ ಯಾವುದೆ ತೊಂದರೆ ಯಾಗದಂತೆ ಪರಿಕ್ಷೆ ಯನ್ನು ನಡೆಸಲು ಸುಚಿಸಿದ್ದಾರೆ .ಬುಧವಾರ ವಿಧಾನಸೌಧದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದರು. ಇಗಾಗಲೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲೂ ಸಿದ್ದತೆ ಪೂರ್ಣಗೊಂಡಿದೆ ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸಂಬಂಧಿಸಿದ ಅಧಿಕಾರಿಗಳು ಆಯಾ ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದ್ದಾರೆ

- Advertisement -

Latest Posts

Don't Miss