National News: ಈ ಬಾರಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ತಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ. ಇಂಡಿಯಾ ಮೈತ್ರಿಕೂಟದ ಜೊತೆಗಿಲ್ಲವೆಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಹಲವು ಪಕ್ಷಗಳನ್ನು ಸೇರಿಸಿ, ಇಂಡಿಯಾ ಮೈತ್ರಿಕೂಟ ಕಟ್ಟಿತ್ತು. ಆದರೆ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಸೀಟು ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯ ಶುರುವಾಗಿದ್ದು, ಹಲವು ಪಕ್ಷಗಳು ಇಂಡಿಯಾ ಮೈತ್ರಿಕೂಟದಿಂದ ಹಿಂದೆ ಸರಿಯುತ್ತಿದೆ.
ಮೊದಲು ಟಿಎಂಸಿ, ಬಳಿಕ ಆಪ್, ಇದೀಗ ಎನ್‌ಸಿ ಪಕ್ಷಗಳು ಕಾಂಗ್ರೆಸ್‌ನಿಂದ ದೂರ ಸರಿದಿವೆ. ಬಂಗಾಳದಲ್ಲಿ ನಾವು ಸ್ವತಂತ್ರವಾಗಿ ಚುನಾವಣೆಗೆ ನಿಲ್ಲಲಿದ್ದೇವೆ ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದರು. ಬಳಿಕ ಪಂಜಾಾಬ್‌ನಲ್ಲಿ ಭಗವಂತ್ ಮಾನ್ ನಾವು ಕೂಡ ಏಕಾಂಗಿ ಸ್ಪರ್ಧೆ ಮಾಡಲಿದ್ದೇವೆ ಎಂದಿದ್ದರು. ಇದೀಗ ಜಮ್ಮು-ಕಾಶ್ಮೀರದಲ್ಲಿ ನಮ್ಮ ಎನ್‌ಸಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಫಾರೂಖ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮೇಲೆ ಜನ ಸಂಪೂರ್ಣ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ ನಮ್ಮ ಪಕ್ಷ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೇ, ಏಕಾಂಗಿ ಹೋರಾಟ ಮಾಡಲಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲವೆಂದು ಸುದ್ದಿಗೋಷ್ಠಿಯ ಮೂಲಕ ಅಬ್ದುಲ್ಲಾ ಸ್ಪಷ್ಟನೆ ನೀಡಿದ್ದಾರೆ.
ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ: DCM
ಅಬುದಾಬಿಯಲ್ಲಿ ಮೊದಲ ಹಿಂದೂ ದೇವಸ್ಥಾನ ಉದ್ಘಾಟನೆ: ಸಂಸದೆ ಸುಮಲತಾ ಅಂಬರೀಷ್ ಭಾಗಿ
ಇಸ್ಪಿಟ್ ಅಡ್ಡೆ ಮೇಲೆ ಇನ್ಸ್‌ಪೆಕ್ಟರ್ ಮುರುಗೇಶ್ ಚೆನ್ನಣ್ಣನವರ್ ನೇತೃತ್ವದಲ್ಲಿ ದಾಳಿ: 6 ಮಂದಿ ಬಂಧನ