www.karnatakatv.net: ಸಿನಿಮಾ- ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಈ ಬಾರಿ ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ. ಜುಲೈ-02ರಂದು ಗೋಲ್ಡನ್ ಸ್ಟಾರ್ ಗಣೇಷ್ ಬರ್ತಡೇ ಇದ್ದು, ಅವರು ಪ್ರತೀ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ರು. ಆದ್ರೆ, ಈ ಬಾರಿ ಕೊರೊನಾದಿಂದಾಗಿ ಹುಟ್ಟು ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ. ಈ ಕುರಿತು ಗಣೇಶ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಹುಟ್ಟು ಹಬ್ಬಕ್ಕಾಗಿ ವ್ಯರ್ಥ ಮಾಡುವ ಹಣವನ್ನ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ. ‘ಎಲ್ಲರಿಗೂ ನಿಮ್ಮ ಗಣೇಶ್ ಮಾಡುವ ನಮಸ್ಕಾರಗಳು, ಮೊದಲಿಗೆ ನನಗೆ ಅರಿವಿದ್ದೊ, ಅರಿವಿಲ್ಲದೆಯೊ ಈ ಕೊವಿಡ್ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮ್ಮ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದ್ರೆ, ಈ ವರ್ಷ ಕೊರೊನಾ ಮಾಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು, ನೋವು ತರಿಸಿದೆ. ಅದೆಷ್ಟೋ ಜನರ ಜೀವಗಳು ನಲುಗಿ ಹೋಗಿವೆ. ಇಷ್ಟೆಲ್ಲಾ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲವೆಂದಿನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.