Tuesday, April 15, 2025

Latest Posts

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

- Advertisement -

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ.

ವಿಧಾನ ಮಂಡಲ ಅಧಿವೇಶನದ ಕೊನೆಯ ದಿನವಾದ ಇಂದು ರಾಜ್ಯದ ಏಳು ಕೋಟಿ ಕನ್ನಡಿಗರ ಪ್ರಗತಿಯ ಮುನ್ನೋಟದೊಂದಿಗೆ ಕೆಲವು ಪ್ರಮುಖ ಘೋಷಣೆಗಳನ್ನು ಮಾಡುತ್ತಿದ್ದೇವೆ. ಭೀಕರ ಬರದಿಂದ ಬೆಳೆ ನಷ್ಟವಾಗಿ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸುವುದು ನಮ್ಮ ಆದ್ಯ ಕರ್ತವ್ಯವೆಂದು ಭಾವಿಸಿದ್ದೇವೆ.

ರೈತರ ಹಿತಕಾಪಾಡುವ ನಮ್ಮ ಪ್ರಯತ್ನದ ಭಾಗವಾಗಿ ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಾವು ನಿರ್ಧರಿಸಿದ್ದೇವೆ. ಇದರಿಂದ ಲಕ್ಷಾಂತರ ರೈತರು ಬಡ್ಡಿಯ ಹೊರೆಯಿಂದ ಮುಕ್ತರಾಗಿ ನೆಮ್ಮದಿಯ ದಿನಗಳನ್ನು ಕಾಣಬಹುದಾಗಿದೆ.

ಪ್ರಾದೇಶಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಧನಾತ್ಮಕ ಬದಲಾವಣೆಯನ್ನು ತರಲು ನಮ್ಮ ಸರ್ಕಾರದ ಹೊಸ ಘೋಷಣೆ.

ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2,000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.

‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

‘ನಾನು ಸಚಿವನಾಗಿ ನನಗೆ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವನು ಹೇಗೆ ಹೋದ?’

- Advertisement -

Latest Posts

Don't Miss