Thursday, December 12, 2024

Latest Posts

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲ ವರ್ಗದ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ

- Advertisement -

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ಕೊಡುವ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

ಕರ್ನಾಟಕ ನಾಗರಿಕ ಸೇವೆಗಳ ನಿಯಮಾವಳಿಗಳ ಪ್ರಕಾರ ಪ್ರತಿವರ್ಷ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ಅರ್ಹತೆಗೆ ಅನುಗುಣವಾಗಿ ಮುಂಬಡ್ತಿ ಕೊಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈ ಮೂಲಕ ಬಡ್ತಿಗಾಗಿ ಕಾಯುವ ಸರ್ಕಾರಿ ನೌಕರರ ಸಂಕಷ್ಟ ತಪ್ಪಲಿದೆ.

ಅ.28 ರಂದು ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಮಾಲೋಚನಾ ಸಮಿತಿ ಸಭೆಯಲ್ಲಿ ಎಲ್ಲ ವರ್ಗದ ಸರ್ಕಾರಿ ನೌಕರರಿಗೂ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮುಂಬಡ್ತಿ ನೀಡುವ ಕುರಿತು ಕ್ರಮ ಕೈಗೊಂಡು ಅನುಪಾಲನಾ ವರದಿ ಕಳುಹಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನವೆಂಬರ್ 15 ರಂದು ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ ಎನ್ನಲಾಗಿದೆ.

- Advertisement -

Latest Posts

Don't Miss