ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಗ್ರಂಥಾಲಯ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಗ್ರಂಥಾಲಯಗಳನ್ನು ಸಂಜೆ 6 ಗಂಟೆಯವರೆಗೆ ತೆರೆದಿರೋದಕ್ಕೆ ಸೂಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7,000ಗಳಿಂದ ರೂ.12,000ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಗ್ರಾಮ ಪಂಚಾಯ್ತಿಗಳ ಹೆಸರನ್ನು ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಎಂದು ಮರು ನಾಮಕರಣಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯ ಸರ್ಕಾರದಿಂದ ಸಾರ್ವಜನಿಕ ರಜೆ ಎಂದು ಘೋಷಿಸಲ್ಪಟ್ಟ ರಜಾ ದಿನಗಳು ಮತ್ತು ಪ್ರತಿ ತಿಂಗಳ ಎರಡನೇ ಮಂಗಳವಾರ ಹಾಗೂ ವಾರದ ರಜೆ ( ಸೋಮವಾರ) ಹೊರತುಪಡಿಸಿ, ಗ್ರಾಮ ಪಂಚಾಯ್ತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೆಲಸದ ವೇಳೆಯನ್ನು ದಿನಾಂಕ 01-06-2022ರಿಂದ ಜಾರಿಗೆ ಬರುವಂತೆ ಪ್ರಸ್ತುತ ಇರುವ 4 ಗಂಟೆಯಿಂದ 6 ಗಂಟೆಯವರೆಗೆ ತೆರೆಯಲು ಸೂಚಿಸಿದೆ.
ಇನ್ನೂ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮೇಲ್ವಿಚಾರಕರ ಗೌರವಧನವನ್ನು ರೂ.7 ಸಾವಿರದಿಂದ 12 ಸಾವಿರಗಳಿಗೆ ಹೆಚ್ಚಿಸಿದೆ. ಅಲ್ಲದೇ ಗ್ರಂಥಾಲಯ ಮೇಲ್ವಿಚಾರಕರಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಆ ಆಧಾರದ ಮೇಲೆ ಗೌರವಧನವನ್ನು ಪಾವತಿಸಲು ಸಹ ತಿಳಿಸಿದೆ.