ಕೈಮಗ್ಗ ನೇಕಾರರಿಗೆ ಗುಡ್ ನ್ಯೂಸ್: ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯ ಕೈಮಗ್ಗ ಉದ್ದಿಮೆಗಳ ಸಹಾಯ ಯೋಜನೆಯಡಿ ಕೈಮಗ್ಗ ನೇಕಾರ ಸಹಕಾರ ಸಂಘಗಳಿಗೆ ಆರ್ಥಿಕ ನೆರವನ್ನು ನೀಡಲು ಶಿವಮೊಗ್ಗ ಜಿಲ್ಲೆಯಲ್ಲಿರುವ ಕೈಮಗ್ಗ ನೇಕಾರ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ದಿನಾಂಕ: 18.08.2022 ರಿಂದ ದಾಖಲಾತಿಗಳೊಂದಿಗೆ ಆನ್‍ಲೈನ್ ಮುಖಾಂತರ ಸಲ್ಲಿಸಬಹುದು ಅಥವಾ ನೇರವಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಗಾಂಧಿನಗರ, 1 ನೇ ಮುಖ್ಯರಸ್ತೆ, ಶಿವಮೊಗ ಇಲ್ಲಿ ಅರ್ಜಿಗಳನ್ನು ಪಡೆದು ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸಲು 09-09-2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಗಾಂಧಿನಗರ, 1 ನೇ ಮುಖ್ಯರಸ್ತೆ, ಶಿವಮೊಗ್ಗ, ದೂ.ಸಂ:-08182-223405 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

About The Author