ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್: ಮೇ ತಿಂಗಳಲ್ಲಿ ಮೂರು ಕಂತಿನ ಹಣ ಒಟ್ಟಿಗೆ ಬಿಡುಗಡೆ

Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್””ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ“ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಮೂರು ತಿಂಗಳ ಹಣ ಒಟ್ಟಿಗೆ ಬಿಡುಗಡೆ ಮಾಡಲು ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಮೇ ತಿಂಗಳಲ್ಲೇ ಮೂರು ತಿಂಗಳ ಹಣ ಗೃಹಲಕ್ಷ್ಮೀಯರ ಖಾತೆಗೆ ಬರಲಿದೆ ಎಂದು ಹೆಬ್ಬಾಳ್ಕರ್ ಹೇಳಿದ್ದಾರೆ.

ನವೆಂಬರ್, ಡಿಸೆಂಬರ್ ತಿಂಗಳ 2 ಕಂತಿನ ಹಣವನ್ನು ಮಾರ್ಚ್ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಮೇನಲ್ಲಿ ಒಂದು ವಾರದ ಅಂತರದಲ್ಲಿ ಮೂರು ತಿಂಗಳ ಕಂತಿನ ಹಣ ಬಿಡುಗಡೆ ಮಾಡುವುದಾಗಿ ಹೆಬ್ಬಾಳ್ಕರ್ ಹೇಳಿದ್ದಾರೆ.

About The Author