ಬೆಂಗಳೂರು: 2022-23ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ 5,159 ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2022-23ನೇ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಒಟ್ಟು 5078 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಲಾಗಿದೆ ಎಂದಿದ್ದಾರೆ.
ಇಲಾಖೆಯ ನಿಮಯಗಳು ಹಾಗೂ ಸುತ್ತೋಲೆಗಳ ಮಾರ್ಗದರ್ಶನದಡಿ ಒಟ್ಟು 5159 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳು ಸರ್ಕಾರದ ಸಹಮಿತಿಯಂತೆ, ವಿಧಿಸಿರುವ ಷರತ್ತುಗಳನ್ನೊಳಗೊಂಡಂತೆ ತಾಲ್ಲೂಕುಗಳಿಗೆ ಅತಿಥಿ ಶಿಕ್ಷಕರನ್ನು ಹಂಚಿಕೆ ಮಾಡಿ, ಅನುಮತಿ ನೀಡಲಾಗಿದೆ ಎಂದಿದ್ದಾರೆ.
ಇನ್ನು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು, ತಾಲೂಕುವಾರು ಹುದ್ದೆಗಳ ವಿವರಗಳನ್ನುಇ-ಮೇಲ್ ಮೂಲಕ ದಿನಾಂಕ 26-07-2022ರೊಳಗೆ ಕಡ್ಡಾಯವಾಗಿ ಕಚೇರಿಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.




