www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ ಬಗ್ಗದ ಸಾರಿಗೆ ಸಿಬ್ಬಂದಿ ತಮ್ಮ ಕುಟುಂಬ ಸಮೇತ ಬೀದಿಗಿಳಿದಿದ್ರು. ಕೆಲಸಕ್ಕೆ ಹಾಜರಾಗದ ಸಿಬ್ಬಂದಿಯಿಂದ ಸಾರಿಗೆ ಇಲಾಖೆ ಸಾಕಷ್ಟು ನಷ್ಟವನ್ನೂ ಅನುಭವಿಸಿತ್ತು. ಹೀಗಾಗಿ ಸುಮಾರು 4200 ಸಾರಿಗೆ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶಿಸಿತ್ತು.
ಆದ್ರೆ ಇದೀಗ ತನ್ನ ನಿಲುವು ಬದಲಿಸಿರೋ ಸರ್ಕಾರ ವಜಾಗೊಂಡ ನೌಕರರ ಮರು ನೇಮಕಕ್ಕೆ ನಿರ್ಧಾರ ಮಾಡಿದೆ. ಈಗಾಗಲೇ ಸಿಎಂ ಬಸವರಾಜಬೊಮ್ಮಾಯಿ ಜೊತೆ ಮಾತುಕತೆ ನಡೆಸಿರುವ ಸಾರಿಗೆ ಸಚಿವ ಬಿ. ಶ್ರೀರಾಮುಲು ಶೀಘ್ರವೇ ಮರುನೇಮಕ ಆದೇಶ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದ್ದಾರೆ. ಇನ್ನು ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆಯುಂಟಾಗಬಾರದು ಅನ್ನೋ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಅಂತ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಕರ್ನಾಟಕ ಟಿವಿ- ಬೆಂಗಳೂರು