ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯ ದರಗಳನ್ನು ಮೂಲ ವೇತನದ ಶೇ.24.50 ರಿಂದ ಶೇ.27.25ಕ್ಕೆ ಹೆಚ್ಚಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸ್ದು, ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2022ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇನದ ಶೇಕಡಾ 24.50 ರಿಂದ ಶೇಕಡಾ 27.25ಕ್ಕೆ ಪರಿಷ್ಕರಿಸಿ, ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 01-01-2022ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಶೇ.24.50 ರಿಂದ ಶೇ.27.25ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.

