Friday, November 22, 2024

Latest Posts

ಸರ್ಕಾರಿ ನೌಕರರ ಮುಷ್ಕರ; ಇಂದಿನ ಪರೀಕ್ಷೆಗಳು ಮುಂದೂಡಿಕೆ !

- Advertisement -

state news

ಬೆಂಗಳೂರು(ಮಾ.1): ರಾಜ್ಯದಲ್ಲಿ ಈಗ ಕೇಳಿಬರುತ್ತಿರುವ ಮುಷ್ಕರ ಈಗ ವಿವಿಧ ಆಯಾಮ ಪಡೆದುಕೊಳ್ಳುತ್ತಿದೆ. ಕೆಲು ದಿನಗಳಿಂದ  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.

ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಕಲಬುರಗಿಯಲ್ಲಿ ಎಸ್​ಎಸ್​ಎಲ್​ಸಿ ಪೂರ್ವಬಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ.

ಬಾಗಲಕೋಟೆಯಲ್ಲಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆಯಾಗಿವೆ. ಇಂದು ಹಿಂದಿ, ಸಂಸ್ಕೃತ ಭಾಷೆ ಪರೀಕ್ಷೆ ನಡೆಯಬೇಕಿತ್ತು. ಆದ್ರೆ, ರಾಜ್ಯಾದ್ಯಂತ ಸರಕಾರಿ ನೌಕರರ ಮುಷ್ಕರ ಹಿನ್ನೆಲೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ರಾಜ್ಯದಲ್ಲಿ ಸರಕಾರಿ ನೌಕರರ ಮುಷ್ಕರ: ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

ಹೋಳಿ ಹಬ್ಬದ ಮಹತ್ತ್ವವೇನು ಗೊತ್ತಾ…?

- Advertisement -

Latest Posts

Don't Miss