Gram Panchayat OC Exemption: ಒಸಿ ಇಲ್ಲದ ಮನೆಗಳಿಗೆ ಸರ್ಕಾರ ಗ್ರೀನ್ ಸಿಗ್ನಲ್!

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಕಡ್ಡಾಯದಿಂದ ವಿನಾಯ್ತಿ ಕೊಟ್ಟಾಯ್ತು. ನಗರ ಸ್ಥಳೀಯ ಸಂಸ್ಥೆಗಳಿಗೂ ಕೊಡಲು ನಿರ್ಧರಿಸಿ ಆಯ್ತು. ಈಗ ಗ್ರಾಮ ಪಂಚಾಯ್ತಿಗಳ ಸರದಿ.

ಹೌದು, ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ 1200 ಚದರಡಿ ವಿಸ್ತೀರ್ಣದ ಅನಧಿಕೃತ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅನುಕೂಲವಾಗುವಂತೆ ‘ಸ್ವಾಧೀನಾ ನುಭವ ಪ್ರಮಾಣಪತ್ರ (ಒಸಿ) ಕಡ್ಡಾಯ’ದಿಂದ / ವಿನಾಯ್ತಿ ನೀಡಲು ಗುರುವಾರ ಸಂಪುಟ ಸಭೆ ತೀರ್ಮಾನಿಸಿದೆ.

ಒಸಿ ಇಲ್ಲದ ಕಾರಣಕ್ಕಾಗಿ ವಿದ್ಯುತ್‌ ಸಂಪರ್ಕ, ನೀರಿನ ಸಂಪರ್ಕ ಪಡೆಯಲಾಗದೆ ಸಮಸ್ಯೆ ಅನುಭವಿಸುತ್ತಿರುವ ಲಕ್ಷಾಂತರ ಮನೆ ಅನುಕೂಲವಾಗಲಿದೆ. 1,200 ಚದರ ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ದೊರೆಯಲಿದೆ.

ಸುಪ್ರೀಂಕೋರ್ಟ್ ಆದೇಶದಿಂದ ಸಿಸಿ, ಒಸಿಯಿಲ್ಲದ ಮನೆ ನಿರ್ಮಿಸಿರುವವರಿಗೆ ಮೂಲಸೌಕರ್ಯ ನೀಡಲು ಸರ್ಕಾರಕ್ಕೆ ಸಮಸ್ಯೆ ಎದುರಾಗಿತ್ತು. ಅದನ್ನು ನಿವಾರಿಸುವ ಸಲುವಾಗಿ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ಮಾದರಿ ಉಪ ವಿಧಿಗಳ ಅಡಿಯಲ್ಲಿ ಒಸಿ, ಸಿಸಿ ಇಲ್ಲದ ವಸತಿ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ, ನೀರಿನ ಸಂಪರ್ಕ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

About The Author