Tuesday, October 14, 2025

Latest Posts

ಹೊಸವರ್ಷದ ಸಂಭ್ರಮಾಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ..!

- Advertisement -

ಬೆಳಗಾವಿ: ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30 ರಿಂದ ಜ 2 ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್​ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್​ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.

- Advertisement -

Latest Posts

Don't Miss