Friday, February 21, 2025

Latest Posts

ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಮೆಟ್ರೋ‌ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ‌ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ವಿದ್ಯುತ್, ನೀರು, ಹಾಲಿನ‌ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ‌‌ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದರು.

ಮೈಸೂರಿನ ಉದಯಗಿರಿ ಗಲಾಟೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನ ಹಿಂತೆಗೆದರೋ‌ ಆಗ ಸರ್ಕಾರ ಯಾರ ಪರ ಇದೆ ಅನ್ನೋದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನೋದು ಗೊತ್ತಾಗುತ್ತೆ. ಈ‌ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ತವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ‌ ಇಲ್ಲ. ಮುಖ್ಯಮಂತ್ರಿಗಳು ಇದನ್ನ‌ ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದ್ರೆ ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

- Advertisement -

Latest Posts

Don't Miss