Thursday, December 4, 2025

Latest Posts

ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ: ಬಸವರಾಜ ಬೊಮ್ಮಾಯಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅಧಿಕೃತವಾಗಿ ಆದೇಶ ಬರಲಿ, ಆಮೇಲೆ ಮಾತನಾಡುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಮೈಕ್ರೋ ಫೈನಾನ್ಸ್ ಹಾವಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ ಇದಕ್ಕೆ ಕಡಿವಾಣ ಹಾಕುತ್ತಿಲ್ಲ. ಸಾಕಷ್ಟು ಜನರು ಕಿರುಕುಳದಿಂದ ಆತ್ಮಹತ್ಯ ಮಾಡಿಕೊಳ್ತಾ ಇದ್ದಾರೆ. ಮಹಿಳೆಯರು ಮಾಂಗಲ್ಯ ಮಾರುತ್ತಾ ಇದ್ದಾರೆ. ಒಂದು ಕಡೆ ಮಹಿಳೆಯರ ಬಗ್ಗೆ ಕಾಳಜಿ ವಹಿಸುತ್ತೇವೆ ಅಂತಾರೆ. ಇನ್ನೊಂದು ಕಡೆ ಕಿತ್ತುಕೊಳ್ತಾ ಇದ್ದಾರೆ. ಮಹಿಳೆಯರು ಇದರಿಂದ ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

- Advertisement -

Latest Posts

Don't Miss