Thursday, June 19, 2025

Latest Posts

ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

- Advertisement -

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದೇ ಇರೋದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಕೇಂದ್ರ, ರಾಜ್ಯ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವನ್ನೇ ಬಳಸುತ್ತಿಲ್ಲ. ಈ ಕ್ರಮವನ್ನು ಬದಲಿಸಿ, ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವಂತೆ ಕೋರಿದ್ದಾರೆ ಎಂದಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪತ್ರದ ಹಿನ್ನಲೆಯಲ್ಲಿ, ಇನ್ಮುಂದೆ ಕರ್ನಾಟಕದಲ್ಲಿ ನಡೆಯುವಂತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಫ್ಲೆಕ್ಸ್, ಬ್ಯಾನರ್, ಪರದೆ ಫಲಕ ಸೇರಿದಂತೆ ಒಟ್ಟಾರೆ ಕಾರ್ಯಕ್ರಮದಲ್ಲಿ ಕನ್ನಡ ಕಡ್ಡಾಯವಾಗಿ ಬಳಿಸುವಂತೆ ಸೂಚಿಸಿ ಆದೇಶಿಸಿದ್ದಾರೆ.

- Advertisement -

Latest Posts

Don't Miss