ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು, ಬನ್ನಿಮರ, ಹೊನ್ನೆಮರ, ಕಿಟಕಿಗಳು, ಬಾಗಿಲು ಹಾಗೂ ದಿಂಡುಗಲ್ಲುಗಳಿಗೆ ಟೆಂಡರ್ ಕರೆದಿದ್ದರು.
ಈ ವೇಳೆ ಕಟ್ಟಡದಲ್ಲಿದ್ದ ಸುಮಾರು 15 ಲಕ್ಷ ಬೆಲೆಬಾಳುವ ವಸ್ತುಗಳನ್ನು 17 ಸಾವಿರ ರೂಪಾಯಿಗಳಿಗೆ ಹರಾಜು ಮಾಡಲಾಗಿದೆ.
ಸರಿಯಾದ ರೀತಿಯಲ್ಲಿ ಪ್ರಕಟಣೆ ಮಾಡಿ ಟೆಂಡರ್ ಮಾಡಿದ್ರೆ ಶಾಲೆ ಅಭಿವೃದ್ಧಿ ಕೆಲಸಕ್ಕೆ ಬಳಸಿಕೊಳ್ಳಬಹುದಿತ್ತು. ಆದ್ರೆ ಅಧಿಕಾರಿಗಳು ಒಳಗೊಳಗೆ ಹಣ ತಿನ್ನುತ್ತಿದ್ದಾರೆ. ಶಾಸಕರ ಗಮನಕ್ಕೆ ತಂದರು ಶಾಸಕರು ದಿವ್ಯ ನಿರ್ಲಕ್ಷ್ಯ ತೋರಿದ್ದಾರೆ.
ಸಾರ್ವಜನಿಕರ ಆಸ್ತಿಯಲ್ಲಿ ಅಧಿಕಾರಿಗಳಿಂದ ದುರುಪಯೋಗವಾಗಿರುವುದಕ್ಕೆ ತನಿಖೆ ಮಾಡುವಂತೆ ಬಸರಾಳು ಗ್ರಾ.ಪಂ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ ಆಗ್ರಹಿಸಿದ್ದಾರೆ. ಇದಕ್ಕೆ ತಕ್ಕ ಕ್ರಮ ಕೈಗೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.