Friday, August 29, 2025

Latest Posts

ರಾಜ್ಯವನ್ನು ‘ಗರ್ಭಕಂಠ ಮುಕ್ತ ಕರ್ನಾಟಕ’ ಮಾಡಲು ಲಸಿಕೆ ನೀಡುವ ನಿರ್ಧಾರ ಕೈಗೊಂಡ ಸರ್ಕಾರ

- Advertisement -

Political News: ರಾಜ್ಯವನ್ನು ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಲಸಿಕೆ ನೀಡುವ ನಿರ್ಧಾರ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಧ್ಯೇಯ ಹೊಂದಿರುವ ನಮ್ಮ ಸರ್ಕಾರ ಭವಿಷ್ಯದಲ್ಲಿ ಮಹಿಳೆಯರನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ಕಾಪಾಡಲು ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‍ಪಿವಿ ಲಸಿಕೆ ಹಾಕುವ ಅಭಿಯಾನಕ್ಕೆ ಒತ್ತು ನೀಡುತ್ತಿದೆ.

ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟಲು ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‍ಪಿವಿ ಲಸಿಕೆ ನೀಡಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾಪವಿದ್ದು, ಶೀಘ್ರವೇ ನಿರ್ಧರಿಸಲಾಗುವುದು.

ಈಗಾಗಲೇ ಗೃಹ ಆರೋಗ್ಯ ಯೋಜನೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಪಾಸಣೆಯೂ ಒಳಗೊಂಡಿದೆ. ಗೃಹ ಆರೋಗ್ಯ ಯೋಜನೆಯನ್ನು ಏಪ್ರಿಲ್ ತಿಂಗಳಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದ್ದು, ರಾಜ್ಯವನ್ನು ‘ಗರ್ಭಕಂಠ ಕ್ಯಾನ್ಸರ್ ಮುಕ್ತ ಕರ್ನಾಟಕ’ ಮಾಡುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

Latest Posts

Don't Miss