Hubli News: ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಅಂಬಿಗೇರ ಹತ್ಯೆಯು ಹುಬ್ಬಳ್ಳಿಯನ್ನು ಬೆಚ್ಚು ಬೀಳುಸುವಂತೆ ಮಾಡಿದ್ದು, ಸರ್ಕಾರದ ಲೋಪ ಸ್ಪಷ್ಟವಾಗಿ ಎದ್ದು ಕಾಣುತ್ತಿದ್ದು, ಇನ್ನೂದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.
ನಗರದಲ್ಲಿ ಹತ್ಯೆಯಾದ ಅಂಜಲಿ ನಿವಾಸಕ್ಕೆ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ವಿಶ್ವನಾಥ ಬೆದರಿಕೆ ಹಾಕಿದ್ದಾಗ ಅಂಜಲಿ ಹಾಗೂ ಆಕೆಯ ಅಜ್ಜಿ ಬೆಂಡಿಗೇರಿ ಠಾಣೆಯ ಪೊಲೀಸರು ಎಚ್ಚೆತ್ತುಕೊಂಡಿದ್ದರೇ ಈ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ ಎಂದರು. ಆದರೇ ಈ ಪರಿಸ್ಥಿತಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣವೇ ಎಂದರು.
ಈ ವಿಚಾರವಾಗಿ ಪೊಲೀಸ್ ಕಮೀಷನರ್ ಅವರಿಗೆ ಆಗ್ರಹ ಮಾಡಿದ್ದೇವು. ಈಗ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿದ್ದಾರೆ. ಸರ್ಕಾರದಲ್ಲಿ ಲೋಪ ಆಗಿದ್ದು ಸ್ಪಷ್ಟವಾಗಿ ಕಂಡು ಬಂದಿದೆ.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಈಗ ಜನಾಕ್ರೋಶ ಎಷ್ಟುಯಿದೆ ಎಂದರೆ ಇಂತಹ ಆರೋಪಿಗಳನ್ನು ಗುಂಡಕ್ಕಿ ಕೊಲ್ಲಬೇಕು ಎಂದು ಒತ್ತಾಯ ಮಾಡುತಿದ್ದಾರೆ. ಜನರು ಕಾನೂನು ಕೈಗೆತ್ತಿಕೊಳ್ಳುವ ಮುನ್ನ ಸರ್ಕಾರವೇ ಸರಿಯಾದ ಕಾನೂನನ್ನು ಜರುಗಿಸಬೇಕೆಂದು ಆಗ್ರಹಿಸಿದರು.
Anjali Case: ಮೊದಲೇ ದೂರು ನೀಡಿದ್ದರೂ ನಿರ್ಲಕ್ಷಿಸಿದ್ದ ಆರೋಪ: ಹುಬ್ಬಳ್ಳಿ ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು
ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ .
ನೀವು ಪಾಕಿಸ್ತಾನದಲ್ಲಿದ್ದರೆ ನಾನು ನಿಮ್ಮನ್ನು ಕಿಡ್ನ್ಯಾಪ್ ಮಾಡುತ್ತಿದ್ದೆ: ಪಾಕ್ ಕ್ಯಾಬ್ ಡ್ರೈವರ್ ಮಾತು ವೈರಲ್