Tuesday, October 14, 2025

Latest Posts

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ!

- Advertisement -

ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಒಂದು ಬಂದಿದೆ. ಸರ್ಕಾರದಿಂದ ವಯೋಮಿತಿ 3 ವರ್ಷಗಳು ಸಡಿಲಿಸಿ ಅಧಿಕೃತ ಆದೇಶ ಹೊರಡಿಸಿದೆ. ಹೌದು ಕರ್ನಾಟಕ ಸರ್ಕಾರವು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ಟಿವಿ ಕೂಡ ವರದಿ ಬಿತ್ತರಿಸಿತ್ತು.

ಹಿಂದೆ ಹೊರಡಿಸಲಾಗಿದ್ದ ಆದೇಶದಲ್ಲಿ ಕೇವಲ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿತ್ತು. ಆದರೆ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘಟನೆಗಳ ಮನವಿಯ ಹಿನ್ನೆಲೆಯಲ್ಲಿ, ಆ ಆದೇಶವನ್ನು ಹಿಂಪಡೆದು ಇದೀಗ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.

ಇದರಿಂದ ಈ ಆದೇಶ ಹೊರಡಿಸಿದ ದಿನಾಂಕದ ನಂತರದಿಂದ 2027ರ ಡಿಸೆಂಬರ್ 31ರವರೆಗೆ ಹೊರಡುವ ನೇರ ನೇಮಕಾತಿ ಅಧಿಸೂಚನೆಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ, ನಿಗದಿತ ಗರಿಷ್ಠ ವಯೋಮಿತಿಗೆ 3 ವರ್ಷಗಳ ಹೆಚ್ಚುವರಿ ಅವಕಾಶ ಸಿಗಲಿದೆ.

ಖಾಲಿ ಹುದ್ದೆಗಳ ಭರ್ತಿ, ನೇಮಕಾತಿಯ ವಯೋಮಿತಿ ಹೆಚ್ಚಳ ಮತ್ತು ಕೆಎಎಸ್ ಅಧಿಸೂಚನೆಯಲ್ಲಿ ಕಂಡುಬ೦ದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ ಅಧಿಸೂಚನೆ ರದ್ದುಪಡಿಸಲು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಇನ್ನೂ ಈ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅನ್ವಯವಾಗುವಂತೆ ಒಂದು ಬಾರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶ ಹೊರಡಿಸಿದ ದಿನಾಂಕದ ಬಳಿಕ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಈ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss