www.karnatakatv.net: ಬೆಂಗಳೂರು :ಸಂಕಷ್ಟದಲ್ಲಿರುವ ಸ್ಯಾಂಡಲ್ ವುಡ್ ಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಕ್ಟೋಬರ್ 1ರಿಂದ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಇಂದು ವಿಧಾನಸೌಧದಲ್ಲಿ ಕೋವಿಡ್ ಎಕ್ಸ್ ಪರ್ಟ್ ಕಮಿಟಿ ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ ಇದ್ದರೆ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತೆ ಎಂದಿದ್ದಾರೆ. ಇನ್ನು ಶೇಕಡಾ 1ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇದ್ದ ಪ್ರದೇಶಗಳಲ್ಲಿ ಶೇ.50ರಷ್ಟು ಆಸನ ಭರ್ತಿಗೆ ಅನುಮತಿ ಹಾಗೆಯೇ ಶೇಕಡಾ 2ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇದ್ದರೆ ಚಿತ್ರಮಂದಿರ ಬಂದ್ ಮಾಡಲಾಗುತ್ತೆ. ಇನ್ನು ಚಿತ್ರಮಂದಿರಕ್ಕೆ ಗರ್ಭಿಣಿಯರು ಮತ್ತು ಮಕ್ಕಳಿಗೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇನ್ನು ಕನಿಷ್ಟ 1 ಡೋಸ್ ಲಸಿಕೆ ಪಡೆದವರು ಮಾತ್ರ ಚಿತ್ರಮಂದಿರ ಪ್ರವೇಶಿಸಬೇಕು ಅಂತ ಸರ್ಕಾರ ಆದೇಶ ನೀಡಿದೆ.
ಇನ್ನು ಪಬ್ ಗಳಿಗೂ ಕೂಡ ಇದೇ ನಿಯಮಗಳು ಅನ್ವಯಿಸಲಿದ್ದು, ಅಕ್ಟೋಬರ್ 3ರಿಂದ ಪಬ್ ಗಳು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಇನ್ನು 6ರಿಂದ 12ನೇ ತರಗತಿಗೆ ಶೇಕಡಾ 100ರಷ್ಟು ಹಾಜರಾತಿಗೆ ಅವಕಾಶ ನೀಡಲಾಗಿದೆ. ವಾರದ ಐದು ದಿನ ಶಾಲಾ ಕಾಲೇಜುಗಳು ತೆರೆಯಲಿವೆ.ಇನ್ನುಳಿದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿಡಲು ಸರ್ಕಾರ ನಿರ್ಧರಿಸಿದೆ.
ಕರ್ನಾಟಕ ಟಿವಿ –ಬೆಂಗಳೂರು