State News : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 19 ಬುಧವಾರ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಜಾರಿಗೊಳಿಸಲಾಯಿತು. ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಇಂದಿನಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಬಹುದಾಗಿದೆ ಎಂದು ಕರೆ ನೀಡಿದರು.
ಇನ್ನು ಈ ಗೃಹಲಕ್ಷ್ಮೀ ಯೋಜನೆಗೆ ನೋಂದಾವಣಿ ಹೇಗೆ ಮಾಡಬಹುದು ಎಂಬುವುದಾಗಿ ನಿಮ್ಮಲ್ಲಿ ಹಲವಾರು ಪ್ರಶ್ನೆ ಮೂಡಬಹುದು. ಅದಕ್ಕೆ ಉತ್ತರ ಇಲ್ಲಿದೆ.
)))))ನೋಂದಾವಣಿ ಹೇಗೆ?
- ರೇಷನ್ ಕಾರ್ಡ್ನಲ್ಲಿ ಗುರುತಿಸಿರುವ ಮಹಿಳೆ ಮೊಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ, ಸ್ಥಳದ ವಿವರ ಎಸ್ಎಂಎಸ್ ಮೂಲಕ ಕಳುಹಿಸಲಾಗುತ್ತದೆ.
- ನೋಂದಣಿ ಮಾಡಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
- ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ತೆರಳಿ ನೋಂದಣಿ ಮಾಡಲಿದ್ದಾರೆ.
- ಸಮಸ್ಯೆಗಳಿದ್ದಲ್ಲಿ 1902ಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್ಎಂಎಸ್ ಮಾಡಿ ಮಾಹಿತಿ ಪಡೆಯಬಹುದು.
- ನಿಗದಿತ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 -7 ಗಂಟೆಯೊಳಗೆ ಭೇಟಿ ನೀಡಿ.
- ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ಗೆ ನೋಂದಣಿ ಮಾಡಿಸಬಹುದು.
- ನೋಂದಣಿ ಆದಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ.
- ಪ್ರಜಾಪ್ರತಿನಿಧಿಗಳಲ್ಲಿ ನೋಂದಣಿ ಯಾದರೆ ಮಂಜೂರಾತಿ ಪತ್ರ ತಡವಾಗಿ ತಲುಪಲಿದೆ.
Siddaramaiah : ಗೃಹಲಕ್ಷ್ಮೀ ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ
Santosh lad: ಸಂತೋಷ್ ಲಾಡ್ ಅಧ್ಯಕ್ಷತೆಯಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಕುರಿತು ಸಭೆ