ದೀಪಾವಳಿ ಹಬ್ಬದ ಹಿನ್ನೆಲೆ, ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಹಣ ಪಾವತಿ ಪ್ರಕ್ರಿಯೆ ಹಂತ ಹಂತವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಜುಲೈ ತಿಂಗಳ ಬಾಕಿ ಹಣವನ್ನು ದಸರಾ ಹಬ್ಬದ ವೇಳೆ ಫಲಾನುಭವಿಗಳಿಗೆ ನೀಡಲಾಗಿತ್ತು. ಇದೀಗ, ದೀಪಾವಳಿಗೆ ಆಗಸ್ಟ್ ತಿಂಗಳ ಹಣ ಬಿಡುಗಡೆ ಮಾಡಲಾಗಿದೆ. ಸಚಿವೆಯವರ ಪ್ರಕಾರ, ಸೆಪ್ಟೆಂಬರ್ ತಿಂಗಳ ಹಣವನ್ನು ಶೀಘ್ರದಲ್ಲೇ ಪಾವತಿಸಲಾಗತ್ತೆ.
ಆದರೆ, ಈ ಹಣವು ಎಲ್ಲ ಫಲಾನುಭವಿಗಳ ಖಾತೆಗೆ ಬಂದಿಲ್ಲ ಎಂಬುದು ಗಮನಾರ್ಹ ಸಂಗತಿ. ಈ ಹಣ ಪಡೆಯಲು ನೀವು ಫಲಾನುಭವಿ ಆಗಿದ್ದರಷ್ಟೇ ಸಾಕಾಗಲ್ಲ. ನಿಮ್ಮ ಹೆಸರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಇ-ರೇಷನ್ ಕಾರ್ಡ್ ಪಟ್ಟಿಯಲ್ಲಿಯೂ ಇರಬೇಕು. ಇಲ್ಲದಿದ್ರೆ ಹಣ ಜಮೆಯಾಗುವುದಿಲ್ಲ ಎನ್ನಲಾಗಿದೆ.
ಹಾಗಾದ್ರೆ ಹೆಸರು ಪಟ್ಟಿಯಲ್ಲಿ ಇದೆಯಾ ಎಂಬುದನ್ನು ಪರಿಶೀಲಿಸುವುದು ಹೇಗೆ?
ಫಲಾನುಭವಿಗಳ ಪಟ್ಟಿಯನ್ನು https://ahara.karnataka.gov.in/Home/EServices ಲಿಂಕ್ ಮೂಲಕ ಪರಿಶೀಲಿಸಬಹುದು. ಆ ವೆಬ್‌ಸೈಟ್‌ನಲ್ಲಿ E-Ration Card Show Village ಆಯ್ಕೆಮಾಡಿ, ನಿಮ್ಮ ಜಿಲ್ಲೆ, ತಾಲೂಕು, ಗ್ರಾಮಪಂಚಾಯತಿ ಹಾಗೂ ಹಳ್ಳಿ ಆಯ್ಕೆ ಮಾಡಿ, ಕ್ಯಾಪ್ಚಾ ನಮೂದಿಸಿ ‘Go’ ಬಟನ್ ಒತ್ತಬೇಕು. ನಂತರದ ಪುಟದಲ್ಲಿ ಫಲಾನುಭವಿಗಳ ಪಟ್ಟಿ ಲಭ್ಯವಾಗುತ್ತದೆ. ಅಲ್ಲಿ ನಿಮ್ಮ ಹೆಸರು ಇದ್ದರೆ, ನಿಮ್ಮ ಖಾತೆಗೆ ಹಣ ಬರುವ ಸಾಧ್ಯತೆ ಇದೆ.
ವರದಿ : ಲಾವಣ್ಯ ಅನಿಗೋಳ