ಗೃಹಲಕ್ಷ್ಮಿ ಹಣ ಬಂದಿಲ್ವಾ? 36ನೇ ಕಂತಿನ ಬಿಗ್ ಅಪ್‌ಡೇಟ್!

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ. 35ನೇ ಕಂತಿನ ಬಳಿಕ ಇದೀಗ 36ನೇ ಕಂತಿನ ಹಣವನ್ನೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹಲವು ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿದೆ. ಇದರ ನಡುವೆ ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಮಹತ್ವದ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಸುಮಾರು ಒಂದು ಲಕ್ಷ ಮೃತ ಮಹಿಳೆಯರ ಖಾತೆಗೂ ಹಣ ಹೋಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಫಲಾನುಭವಿಗಳ ದಾಖಲೆ ಮರುಪರಿಶೀಲನೆಗೆ ನಿರ್ಧರಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಂದರ ಹಿಂದೆ ಒಂದರಂತೆ ಎರಡು ಪ್ರಮುಖ ಅಪ್‌ಡೇಟ್‌ಗಳು ಸಿಕ್ಕಿವೆ. ಕಳೆದ ಕೆಲವು ಸಮಯದಿಂದ 34, 35 ಮತ್ತು 36ನೇ ಕಂತಿನ ಹಣ ಬಿಡುಗಡೆಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದರೆ ನವೆಂಬರ್ 18ರಂದು 35ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇದೀಗ 36ನೇ ಕಂತಿನ ಹಣವನ್ನೂ ಸರ್ಕಾರ ಬಿಡುಗಡೆ ಮಾಡಿದೆ. ವರದಿಗಳ ಪ್ರಕಾರ, ಈ ಮೂರು ಕಂತುಗಳಿಗೆ ಒಟ್ಟು 7,405.86 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಇನ್ನೊಂದೆಡೆ, ಯೋಜನೆಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಹೊಸ ಕ್ರಮ ಕೈಗೊಂಡಿದೆ. ಎಲ್ಲಾ ಫಲಾನುಭವಿಗಳ ದಾಖಲೆಗಳನ್ನು ಮತ್ತೊಮ್ಮೆ ಪರಿಶೀಲಿಸಲು ಹೊಸ ಅರ್ಜಿ ನಮೂನೆ ಸಿದ್ಧಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಅಚ್ಚರಿಯ ವಿಚಾರ ಅಂದ್ರೆ, ರಾಜ್ಯದಲ್ಲಿ ಮೃತಪಟ್ಟಿರುವ ಸುಮಾರು ಒಂದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಗೃಹಲಕ್ಷ್ಮಿ ಹಣ ಪಾವತಿಯಾಗುತ್ತಿರುವುದು ಪರಿಶೀಲನೆಯಲ್ಲಿ ಗೊತ್ತಾಗಿದೆ ಎನ್ನಲಾಗಿದೆ.

ಇದರ ಜೊತೆಗೆ ತಪ್ಪು ಮೊಬೈಲ್ ಸಂಖ್ಯೆ ಮತ್ತು ಬೇರೆಯವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾದ ಪ್ರಕರಣಗಳೂ ಬೆಳಕಿಗೆ ಬಂದಿವೆ. ಹೀಗಾಗಿ ನೈಜ ಫಲಾನುಭವಿಗಳಿಗೆ ಮಾತ್ರ ಹಣ ತಲುಪಿಸುವ ಉದ್ದೇಶದಿಂದ ದಾಖಲೆಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ.

About The Author