ಹುಬ್ಬಳ್ಳಿ : ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ನೌಕರನ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗರ ಬಂದಿದೆ. ಕರೆಂಟ್ ಬಿಲ್ ಜಾಸ್ತಿ ಬಂದಿದೆ ಎಂದು ಆರೋಪಿಸಿ ಮಹಾಲಕ್ಷ್ಮಿ ಬಡವಾವಣೆಯಲ್ಲಿ ಅಬ್ದುಲ್ ಕಲಾಯಿಗಾರ ಎಂಬಾತ ಹೆಸ್ಕಾಂ ಸಿಬ್ಬಂದಿ ಮಲ್ಲಯ್ಯ ಗಣಾಚಾರಿ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಮಲ್ಲಯ್ಯ ಅವರ ತಲೆಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆರೋಪಿ ಅಬ್ದುಲ್ ಹೆಸ್ಕಾಂ ಗ್ರಾಹಕರಾಗಿದ್ದು ಕಳೆದ ಎರಡು ಮೂರು ತಿಂಗಳ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಈ ತಿಂಗಳ ಬಿಲ್ 5 ಸಾವಿರಕ್ಕಿಂತ ಜಾಸ್ತಿ ಬಂದಿದೆ.ಅಬ್ದುಲ್ ಕುಟುಂಬದ ವಿದ್ಯುತ್ ಬಳಕೆ 200 ಯೂನಿಟ್ ಜಾಸ್ತಿ ಇರುವ ಹಿನ್ನೆಲೆ ಗೃಹ ಜ್ಯೋತಿ ಯೋಜನೆ ಸಹ ಕ್ಯಾನ್ಸಲ್ ಆಗಿದೆ. ಇದರಿಂದ ಕೋಪಗೊಂಡಿದ್ದ ಅಬ್ದುಲ್, ಕರೆಂಟ್ ಬಿಲ್ ನೀಡಲು ಹೋದ ಮಲ್ಲಯ್ಯ ಮೇಲೆ ಹಲ್ಲೆ ನಡೆಸಿ,ಇಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದು, ಮನಬಂದಂತೆ ಥಳಿಸಿದ್ದಾನೆ.
ಸ್ಥಳೀಯರು ನೌಕರ ಮಲ್ಲಯ್ಯನನ್ನು ರಕ್ಷಣೆ ಮಾಡಿ ಕಿಮ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಲ್ಲಯ್ಯ ತೀವ್ರವಾಗಿ ಗಾಯಗೊಂಡಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಮಾಹಿತಿ ನೀಡಿದ್ದಾರೆ.
K H Muniyappa : ಈ ತಿಂಗಳೂ ಅಕ್ಕಿ ಬದಲಾಗಿ ಹಣ ನೀಡಲಾಗುವುದು : ಸಚಿವ ಕೆ.ಹೆಚ್.ಮುನಿಯಪ್ಪ
Santosh lad: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಪರೇಷನ್ ಮಾಡುವುದು ಜನರು
Flag Fight: ಟವರ್ನಲ್ಲಿ ಇಸ್ಲಾಂ ಬಾವುಟದ ಕೆಳಗೆ ಭಗವಾ ಧ್ವಜ ಕಟ್ಟಿದ ಆರೋಪ,