Saturday, May 25, 2024

Latest Posts

Gruha laxmi: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಂದ ಲಂಚ ವಸೂಲಿ

- Advertisement -

ದೇವದುರ್ಗ: ಕಾಂಗ್ರಸ್ ಸರ್ಕಾರ ಹೊರಡಿಸಿರುವ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಜುಲೈ 19 ರಿಂದ ಅರ್ಜಿ ಸಲ್ಲಿಕೆಗೆ ಚಾಲನೆ ಮಾಡಲಾಯಿತು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಕೆಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ,. ಹಾಗೆಯೆ ಗ್ರಾಮಸ್ಥರಿಗೆ  ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯಿತಿಗಳಲ್ಲಿ ಅವಕಾಶ ನೀಡಲಾಗಿತ್ತು .ಇದೆ ವೇಳೆ ಅರ್ಜಿ ಸಲ್ಲಿಕೆಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಎಂದು ಹೇಳಿದ್ದರು.

ಒಂದು ವೇಳೆ  ಯಾರಾದರೂ ಅರ್ಜಿ ಸಲ್ಲಿಕೆಗೆ ಲಂಚ ತೆಗೆದುಕೊಂಡರೆ ಅಂತವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೆ ದೇವದುರ್ಗ ತಾಲೂಕಿನ ಹಿರೇಬೂದುರು ಗ್ರಾಮದಲ್ಲಿ ಗೃಹಲಕ್ಷ್ಮಿ ಅರ್ಜಿಗೆ ಲಂಚ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ.

ಅದರೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹಿರೇಬೂದುರು ಗ್ರಾಮದಲ್ಲಿ ಅರ್ಜಿದಾರರು ಅರ್ಜಿಯನ್ನು ಸಲ್ಲಿಸುತ್ತಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸೂಗಪ್ಪ ಅರ್ಜಿ ಸಲ್ಲಿಕೆಗೆ ಗ್ರಾಮಸ್ಥರಿಂದ 50 ರೂ ಲಂಚ ತೆಗೆದುಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮಸ್ತರು ಈ ಸಿಬ್ಬಂದಿ ವಿರುದ್ದ ಸೂಕ್ತ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.

Jawan: ಜವಾನ್ ಸಿನಿಮಾದ ಹಾಡಿನ ಚಿತ್ರೀಕರಣ್ಕಕ್ಕೆ ಸುರಿದ ದುಡ್ಡು ಎಷ್ಟು ಕೋಟಿ ಗೊತ್ತಾ?

 

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

School holiday: ರಾಯಚೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

- Advertisement -

Latest Posts

Don't Miss