- Advertisement -
ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲೆಯಲ್ಲಿ 243 ಕಡೆಗಳಲ್ಲಿ led screen ಗಳ ಮೂಲಕ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯನ್ನು ಜನರಿಗೆ ತೋರಿಸಲಾಯಿತು.
ಒಟ್ಟು ಧಾರವಾಡ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗಾಗಿ 4,04,848 ಫಲಾನುಭವಿಗಳು ಇದ್ದು, 3, 40,199 ಫಲಾನುಭವಿಗಳು ನೊಂದಣಿಯಾಗಿದ್ದಾರೆ. ಶೇಕಡಾ 84 ರಷ್ಟು ಗುರಿ ಸಾಧನೆ ಮಾಡಲಾಗಿದೆ.
Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು
- Advertisement -