Tuesday, May 21, 2024

Latest Posts

Womens : ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಸಾಗರೋಪಾದಿಯಲ್ಲಿ ಸೇರಿದ ನಾರಿಯರು

- Advertisement -

ಮೈಸೂರು; ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಷಣೆಯ ಚಾರಿತ್ರಿಕವಾದ ಸಮಾವೇಶದ ಐತಿಹಾಸಿಕ ಸಂದರ್ಭದ ಹೈಲೈಟ್ಸ್

ಗೃಹಲಕ್ಷ್ಮಿ ಯೋಜನೆ ಲೋಕಾರ್ಷಣೆಗೆ ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ ಭಾರತದ ತಮಿಳುನಾಡು, ತೆಲಂಗಾಣ, ಆಂಧ್ರ ಮತ್ತು ಕೇರಳದಿಂದಲೂ ಸಾವಿರಾರು ನಾರಿಯರು, ಗೃಹಿಣಿಯರು “ಗೃಹಲಕ್ಷ್ಮಿ” ಉದ್ಘಾಟನೆಗೆ ಸಾಕ್ಷಿಯಾಗಿದ್ದಾರೆ.

ಶ್ರಮಿಕ ವರ್ಗದ, ದುಡಿಯುವ ವರ್ಗಗಳ ಮಹಿಳೆಯರು, ಮಹಿಳಾ ಕಾರ್ಮಿಕರು ಮಹಿಳಾ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಸ್ಫೂರ್ತಿಯಿಂದ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬಂದಿರುವುದು ವಿಶೇಷವಾಗಿದೆ.

ಕಾಲೇಜು ವಿದ್ಯಾರ್ಥಿನಿಯರು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ತಮ್ಮ ವಿದ್ಯಾಭ್ಯಾಸಕ್ಕೆ ಬಹಳ ದೊಡ್ಡ ಮಟ್ಟದಲ್ಲಿ ನೆರವಾದ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ ಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾರ್ಗದುದ್ದಕ್ಕೂ ಅಭಿನಂದನೆ, ಧನ್ಯವಾದ ಹೇಳುವ ಬ್ಯಾನರ್ ಗಳನ್ನು ಹಿಡಿದು ಸಮಾವೇಶಕ್ಕೆ ಆಗಮಿಸಿದ್ದಾರೆ.

ಬೆಳಗ್ಗೆ 10 ಗಂಟೆ ವೇಳೆಗೇ ಮಹಾರಾಜ ಗ್ರೌಂಡ್ ನಲ್ಲಿ ತುಂಬಿ ತುಳುಕುತ್ತಿದ್ದ ಮಹಿಳಾ ಜನಸ್ತೋಮ ಪಿಂಕ್ ಬಣ್ಣದ ಧಿರಿಸಿನಲ್ಲಿ ಸಮಾವೇಶದ ಮೈದಾನದಲ್ಲಿ ಕಂಗೊಳಿಸಿದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿನಿಯರು ಮತ್ತು ಗೃಹಿಣಿಯರು.

ಸರ್ಕಾರದ ಕಾರ್ಯಕ್ರಮ ಮತ್ತು ಯೋಜನೆಗಳ ಚರಿತ್ರೆಯಲ್ಲಿ ಏಕ ಕಾಲಕ್ಕೆ, ಪ್ರತೀ ತಿಂಗಳು ಒಂದೂವರೆ ಕೋಟಿಗೂ ಹೆಚ್ಚು ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿಸುವ ಸರ್ಕಾರಿ ಚಳವಳಿಯ ಚೈತನ್ಯ ಪಡೆದುಕೊಂಡ ಕಾರ್ಯಕ್ರಮವೆನಿಸಿತ್ತು.

Welcome: ರಾಹುಲ್ ಗಾಂಧಿಯನ್ನು ಸ್ವಾಗತಿಸಿದ ಮುಖ್ಯಮಂತ್ರಿಗಳು..!

 

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

Raksha Bandhan: ಬಿಡುವು ಮಾಡಿಕೊಂಡು ರಾಕಿ ಕಟ್ಟಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್..!

- Advertisement -

Latest Posts

Don't Miss