Saturday, July 5, 2025

Latest Posts

ಜಿ.ಎಸ್. ಬಸವರಾಜ ರಾಜಕೀಯಕ್ಕೆ ನಿವೃತ್ತಿ ಘೋಷಣೆ..!

- Advertisement -

ತುಮಕೂರು: ತುಮಕೂರು ಕ್ಷೇತ್ರದ ಸಂಸದ, ಬಿಜೆಪಿ ನಾಯಕ ಜಿ.ಎಸ್. ಬಸವರಾಜ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2024ರ ಲೋಕಸಭೆ ಚುನಾವಣೆಗೆ ಮೊದಲೇ ಸಂಸದರು ಚುನಾವಣಾ ರಾಜಕೀಯಕ್ಕೆ ಗುಡ್‌ ಬೈ ಹೇಳಿದ್ದಾರೆ. ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಪಕ್ಷ ನಿಷ್ಠೆ ಮತ್ತು ವ್ಯಕ್ತಿ ನಿಷ್ಠೆಗೆ ಹೆಸರಾಗಿರುವ ನಾಯಕ ಈಗ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ

2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರನ್ನು ಸೋಲಿಸಿ ಜಿ. ಎಸ್. ಬಸವರಾಜ ಮತ್ತೊಮ್ಮೆ ಲೋಕಸಭೆ ಪ್ರವೇಶ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಜಿ. ಎಸ್. ಬಸವರಾಜ ಪುತ್ರ ಜ್ಯೋತಿ ಗಣೇಶ್ ಸದ್ಯ ತುಮಕೂರು ನಗರ ಕ್ಷೇತ್ರದ ಬಿಜೆಪಿ ಶಾಸಕರು. ಇನ್ನು ಮುಂದೆ ಚುನಾವಣೆಯಲ್ಲಿ ನಿಲ್ಲುವುದಿಲ್ಲ. ಆದರೆ ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನಗಳ ಸಂದರ್ಭದಲ್ಲಿ ಜೊತೆಯಾಗಿರುವೆ ಎಂದು ಜಿ. ಎಸ್. ಬಸವರಾಜ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಂದೆಯೇ ತಿಪಟೂರಿನಲ್ಲಿ ಘೋಷಣೆ ಮಾಡಿದ್ದಾರೆ.

ಮಠ ವಿದ್ಯಾರ್ಥಿ ನಿಲಯವಾಗಬೇಕು, ಜ್ಞಾನಾರ್ಜನೆ ಅನ್ನದಾಸೋಹವಾಗಬೇಕು : ಸಿಎಂ ಬೊಮ್ಮಾಯಿ

ತಿಪಟೂರಿನಲ್ಲಿ ನಡೆಯುತ್ತಿರುವ ಶ್ರೀ ಗುರು ಸಿದ್ಧರಾಮೇಶ್ವರರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿನ ಜಿ. ಎಸ್. ಬಸವರಾಜ, “ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ನೀರಾವರಿ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಜೊತೆಯಾಗಿರುವೆ” ಎಂದರು. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್.‌ ಯಡಿಯೂರಪ್ಪ ಸಹ ಪಾಲ್ಗೊಂಡಿದ್ದರು.

ನೇಪಾಳ ವಿಮಾನ ಪತನ : ಎಲ್ಲಾ ಪ್ರಯಾಣಿಕರು ಸಾವು

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

- Advertisement -

Latest Posts

Don't Miss