ಜಿಎಸ್‌ಟಿ ತಿದ್ದುಪಡಿ ರಾಜ್ಯಕ್ಕೆ ತೀವ್ರ ನಷ್ಟ – ಕೇಂದ್ರ ಸರ್ಕಾರದ ರಾಜಕೀಯ ಗಿಮಿಕ್!

ಕೇಂದ್ರ ಸರ್ಕಾರ ಜಿಎಸ್‌ಟಿ ದರಗಳಲ್ಲಿ ಮಾಡಿದ ತಿದ್ದುಪಡಿಯಿಂದ ಕರ್ನಾಟಕ ರಾಜ್ಯಕ್ಕೆ ಅಂದಾಜು ₹15,000 ಕೋಟಿ ರೂ.ಗಳ ನಷ್ಟ ಸಂಭವಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಮೈಸೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜಿಎಸ್‌ಟಿಯನ್ನು ತಕ್ಷಣ ಸರಳೀಕರಿಸಿದ್ದಾರೆ. ಇದು ನಿಜಕ್ಕೂ ಅರ್ಥವಿಲ್ಲದ, ರಾಜಕೀಯ ಲಾಭದ ಕಸರತ್ತು ಎಂದು ವ್ಯಂಗ್ಯವಾಡಿದರು.

ಕಳೆದ ಎಂಟು ವರ್ಷಗಳಿಂದ ತಾವೇ ಹೆಚ್ಚಿಸಿದ GST ದರವನ್ನು ತಾವೇ ಕಡಿಮೆ ಮಾಡಿ. ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಇದರಿಂದ ನಮ್ಮ ರಾಜ್ಯಕ್ಕೆ ಭಾರಿ ನಷ್ಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3,200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತರಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ. 3.5 ರಷ್ಟು ನೀಡುತ್ತಿರುವುದು ಅನ್ಯಾಯ.

ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ, ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ರಾಜ್ಯ ದೊರೆಯುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತ ಸಚಿವರು ರದ್ದುಪಡಿಸಿದರು ಎಂದರು.

ವರದಿ : ಲಾವಣ್ಯ ಅನಿಗೋಳ

 

About The Author