Sunday, December 1, 2024

Latest Posts

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

- Advertisement -

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ ಗೆಲುವನ್ನು ಖಾತ್ರಿಪಡಿಸುತ್ತಿದೆ. ಚನ್ನಪಟ್ಟಣದಲ್ಲಿ ನಿಂತುಹೋಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮರುಚಾಲನೆ ನೀಡಲು ನಮ್ಮ ಅಭ್ಯರ್ಥಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ, ನನ್ನ ಕೈಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡುತ್ತೇನೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರ ಗೆಲುವು ಸಿದ್ದರಾಮಯ್ಯನ ಗೆಲುವು ಇದ್ದಂತೆ. ಇಲ್ಲಿ ಈ ಬಾರಿ ಕಾಂಗ್ರೆಸ್‌ನ ವಿಜಯದ ಪತಾಕೆ ಹಾರುವುದು ಗ್ಯಾರಂಟಿ ಎಂದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವನ್ನು ನಾನೂ ನೋಡುತ್ತೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು. ನನ್ನ ಈ ಕೋರಿಕೆಯನ್ನು ತಾವೆಲ್ಲರೂ ಈಡೇರಿಸುತ್ತೀರಿ ಎಂದು ನಂಬಿದ್ದೇನೆ. ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್, ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅಭಿವೃದ್ಧಿಪರವಾಗಿರುವ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಖುಷಿಯಿಂದ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕು ಎಂದು ಸಿಎಂ ಚನ್ನಪಟ್ಟಣ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಬಹುಮತದಿಂದ ಜಯಗಳಿಸೋದು ಖಚಿತ. ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿ ಅವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

Latest Posts

Don't Miss